ಕೆರೆಗೆ ಬಟ್ಟೆ ತೊಳೆಯಲು ಹೋಗುತ್ತಿದ್ದ ಮಹಿಳೆಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ತಾಲೂಕಿನ ಕುಂಚೂರು ಗ್ರಾಮದಲ್ಲಿ ನಡೆದಿದೆ. ದ್ಯಾಮವ್ವ ಚಂದ್ರಗೌಡ ಪಾಟೀಲ (45) ಮೃತ ದುರ್ದೈವಿ. ಬಿಸಲಹಳ್ಳಿ ಗ್ರಾಮದ ಚಂದ್ರಪ್ಪ ಕುಂಬಾರ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.