ಆಟೋ ಚಾಲಕನ ಮೇಲೆ ರವಿವಾರ ರಾತ್ರಿ ಮಂಗಳೂರಿನ ಫಳ್ನೀರ್ ನಲ್ಲಿ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು. ಇದು ಆಟೊ ಚಾಲಕನೇ ಸೃಷ್ಟಿಸಿದ ಕಟ್ಟು ಕಥೆ ಎಂಬ ವಿಚಾರ ಪೊಲೀಸರು ನಡೆಸಿದ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರಕಟಣೆಯಲ್ಲಿಂದು ತಿಳಿಸಿದ್ದಾರೆ. ರಿಕ್ಷಾ ಚಾಲಕ ಬಶೀರ್ ಎಂಬುವವರು ಪೊಲೀಸರಿಗೆ ಮಾಹಿತಿ ನೀಡುತ್ತೇನೆ ಎಂಬ ಆರೋಪದಲ್ಲಿ ಅಪರಿಚಿತ ತಂಡವೊಂದು ತನ್ನ ಹಲ್ಲೆ ನಡೆಸಿರುವುದಾಗಿ ಪೊಲೀಸ್ ದೂರು ನೀಡಿದ್ದರು.