ಶಾರ್ಟ್ ಸರ್ಕ್ಯೂಟ್ ನಿಂದ ಪ್ಯಾನಲ್ ಬೋರ್ಡ್ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರಿನ ಜಯನಗರ ಬಡಾವಣೆಯಲ್ಲಿ ನಡೆದಿದೆ. ಶ್ರೀನಿವಾಸ್ ಎಂಬುವರ ಮನೆಯಲ್ಲಿ ಈ ಘಟನೆ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ನಡೆದಿದ್ದು ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರವೀಣ್ ಅವರ ನೇತೃತ್ವದ ತಂಡ ಬೆಂಕಿ ನಂದಿಸಿ ಆಗಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ಅಧಿಕಾರಿಗಳು ತೆರಳಿ ಅನಾಹುತವನ್ನು ತಪ್ಪಿಸಿದ್ದಾರೆ. ಇದೆ ವೇಳೆ ಅಧಿಕಾರಿಗಳು ಮನೆಗೆ ಅಳವಡಿಸಿರುವ ವಯರಿಂಗ್ ವ್ಯವಸ್ಥೆಯಲ್ಲಿ ಆಗಿರುವ ಅನಾನುಕೂಲತೆ ಹಾಗೂ ಸಮಸ್ಯೆಯಿಂದಾಗಿ ಈ ರೀತಿ ಶಾರ್ಟ್ ಸರ್ಕ್ಯೂಟ್ ಆಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಉತ್ತಮ ವಯರ್ ಅಳವಡಿಸಿದರೆ ಸಮಸ್ಯೆಗಳ