ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಎಮ್ಮೆಕೆರೆ, ಪಾಂಡೇಶ್ವರದ ರಮಾ ಲಕ್ಷ್ಮೀನಾರಾಯಣ ಸಭಾಭವನದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ ಸುವರ್ಣ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿ ಸದಸ್ಯರನ್ನು ಸ್ವಾಗತಿಸಿ ಮಾತನಾಡಿದ ಯಶ್ ಪಾಲ್ ಸುವರ್ಣ, ಕರಾವಳಿ ಜಿಲ್ಲೆಯ ಮೀನುಗಾರರ ಸಮಸ್ಯೆ ಬೇಡಿಕೆಗಳಿಗೆ ಹಲವು ದಶಕಗಳಿಂದ ಸ್ಪಂದಿಸಿ ಮೀನುಗಾರರ ಸಮಸ್ಯೆಗಳಿಗೆ ಧ್ವನಿಯಾಗಿ ಫೆಡ್ರೇಶನ್ ಕಾರ್ಯ ನಿರ್ವಹಿಸುತ್ತಿದ್ದೆ ಎಂದರು.