ವಿಜಯಪುರ ಜಿಲ್ಲೆಯಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ಬ್ಯೂಟಿ ಪಾರ್ಲರ್ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕೆ ಆರ್ ಎಸ್ ಪಾರ್ಟಿ ವತಿಯಿಂದ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ವಿಜಯಪುರ ಜಿಲ್ಲೆಯಲ್ಲಿ ಅನಧಿಕೃತವಾಗಿಯೇ ಬ್ಯೂಟಿ ಪಾರ್ಲರ್ಗಳು ನಿರ್ಮಾಣವಾಗಿ ಗ್ರಾಹಕರಿಂದ ಸಾಕಷ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಕೂಡಲೇ ಇದಕ್ಕೆ ಕಡಿವಾಣ ಹಾಕಿ ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.