ಹಾಸನ: ಅರಸೀಕೆರೆಯಲ್ಲಿ ಕೆಲ ಕಿಡಿಗೇಡಿಗಳು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು ಮಾನ ಹಾನಿ ಮಾಡುವ ಕೆಲಸ ಮಾಡಿದ್ದಾರೆ ಅಂತವರ ವಿರುದ್ಧ ಶೀಘ್ರವಾಗಿ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ ಶಿವಲಿಂಗೇಗೌಡ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಈ ಹಿಂದೆ ರಾಗಿ ಖರೀದಿ ವಿಚಾರದಲ್ಲಿ ಇಲ್ಲಸಲ್ಲದ ಆರೋಪ ಮಾಡಿದ್ದರು ಇದಕ್ಕೆ ಸಂಭಂದಿಸಿದಂತೆ ತಾನು ಧರ್ಮಸ್ಥಳಕ್ಕೆ ಹೋಗಿ ಪ್ರಮಾಣ ಮಾಡಿ ನಾನು ತಪ್ಪು ಮಾಡಿಲ್ಲ ಎಂಬುದನ್ನು ಸಾಬೀತು ಮಾಡಿದ್ದೇನೆ ಆದರೂ ಕೆಲವರು ನನ್ನ ವಿರುದ್ಧ ಅಪಪ್ರಚಾರ ಮುಂದುವರೆದಿದ್ದಾರೆ ಇದನ್ನು ನಾನು ಸಹಿಸುವುದಿಲ್ಲ ಎಂದರು.ಕೆಲವರು ನನ್ನ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಇಲ್ಲಸಲ್ಲದ ಆರೋಪ ಮಾಡಿದ್ದಾರೆ ಎಂದರು.