ರಾಜಯೋಗಿನಿ ದಾದಿ ಪ್ರಕಾಶಮಣಿ ಅವರ ಸ್ಮರಣಾರ್ಥ ರಕ್ತದಾನ ಶಿಬಿರ ನಗರದಲ್ಲಿ ಇಂದು ನಡೆಯಿತು. ಆಗಸ್ಟ್ 24 ರಂದು ಮಧ್ಯಾಹ್ನ 12-30 ಗಂಟೆಗೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾಲಯದಿಂದ ಈ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಡಾ.ಶ್ರೀನಿವಾಸ ಹ್ಯಾಟಿ. ಕೊಪ್ಪಳ ಜಿಲ್ಲೆಯ ಪ್ರಜಾಪಿತ ಬ್ರಹ್ಮ ಕುಮಾರಿ ವಿಶ್ವ ವಿದ್ಯಾಲಯದ ಸಂಚಾಲಕಿ ಯೋಗಿನಿ ಅಕ್ಕ ಸಾಹಿತಿ ಮಹಾಂತೇಶ ಮಲ್ಲನಗೌಡರ ಸೇರಿದಂತೆ ಹಲವರು ಉಪಸ್ಥಿತರಿದ್ದರು