ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಪ್ರಚಾರಗಳು ಧರ್ಮಭಾವನೆಗೆ ಧಕ್ಕೆ ತರುವಂತಿವೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳದಲ್ಲಿ ನಡೆದ ಘಟನೆಗಳ ಬಗ್ಗೆ ಸುಳ್ಳು ಆರೋಪಗಳನ್ನು ಆಧಾರಮಾಡಿಕೊಂಡು ರಚಿಸಿರುವುದು ಸರಕಾರ ಎಸ್ ಐಟಿ ಖಂಡನೀಯ ಎಂದು ಅವರು ಹೇಳಿದರು. . ಇಂದು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು "ಧರ್ಮಸ್ಥಳವನ್ನು ಕಳಂಕಗೊಳಿಸುವ ಪ್ರಯತ್ನ ನಡೆಯುತ್ತಿದೆ. ಧರ್ಮಸ್ಥಳದಲ್ಲಿ ನೂರಾರು ಕೊಲೆಗಳಾಗಿವೆ ಎಂಬ ಸುಳ್ಳು ಹೇಳಿಕೆಗಳನ್ನು ನಂಬಿ ಸರ್ಕಾರ ಎಸ್‌ಐಟಿ ರಚಿಸಿದೆ. ಇದು ಭಕ್ತರ ಭಾವನೆಗೆ ಅವಮಾನ, ಸರ್ಕಾರ ತಕ್ಷಣವೇ ಈ ಸುಳ್ಳು ಪ್ರಚಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು" ಎಂದು ಒತ್ತಾಯಿಸಿದರು.