ಜಿಲ್ಲೆ ಪ್ರವಾಸದ ಮುದ್ದೇಬಿಹಾಳ ಪಟ್ಟಣದ ಅರಣ್ಯ ಅಧಿಕಾರಿಗಳ ಕಚೇರಿಯಲ್ಲಿ ಸಚಿವ ಈಶ್ವರ ಖಂಡ್ರೇ ಅವರು ಜಿಲ್ಲೆ ಹಾಗೂ ತಾಲೂಕು ಮಟ್ಟದ ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ, ಅರಣ್ಯ ಒತ್ತುವರಿ ತೆರವು, ಹಸಿರು ಹೊದಿಕೆಯ ವೃದ್ಧಿ, ಅರಣ್ಯ ಸಂರಕ್ಷಣೆ, ವೃಕ್ಷಾರೋಪಣ ಹಾಗೂ ಪರಿಸರ ಸಮತೋಲನ ಕಾಪಾಡುವ ಕುರಿತು ಸಮಗ್ರ ಚರ್ಚೆ ನಡೆಸಿದರು. ಸಮಾಜದ ಸಹಕಾರದೊಂದಿಗೆ ಅರಣ್ಯ ಸಂಪತ್ತನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಉಳಿಸಿ ಎಂದರು..