ಸೆ.7 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ : ಅರ್ಥಪೂರ್ಣ ಆಚರಣೆಗೆ ಕರೆ ಚಿತ್ರದುರ್ಗ ಆಗಸ್ಟ್.29: ಮುಂಬರುವ ಸೆಪ್ಟೆಂಬರ್ 7 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಜಿಲ್ಲಾಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಉಪವಿಭಾಗಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿರುವ ಉಪ ವಿಭಾಗಧಿಕಾರಿ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ಈ ಕುರಿತು ಏರ್ಪಡಿಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಷ್ಠಾಚಾರದ ಪ್ರಕಾರ ಜಯಂತಿಗೆ ಎಲ್ಲಾ ಜನಪ್ರತಿನಿಧಿಗಳು ಆಹ್ವಾನಿಸಬೇಕು. ಗೀತಾಗಾಯನ, ಬ್ರಹ್ಮಶ್ರೀ ನಾರಾಯಣ ಗ