ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗದಗ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಹೌದು.. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿದ್ದಾಗ ಹೊರ ಭಾಗದಲ್ಲಿ ನಿಂತು ಮುಂಡರಗಿ ಪಟ್ಟಣಕ್ಕೆ ಪ್ರೌಢಶಾಲೆಯನ್ನು ಮಂಜೂರು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.