ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಬಹುದಿನಗಳ ಬೇಡಿಕೆಯಿತ್ತು. ರಾಜ್ಯ ಕಾಂಗ್ರೆಸ್ ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಿರ್ಧರಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ವಿಜಯಪುರದಲ್ಲಿ ಹೋರಾಟಕ್ಕೆ ಮುಂದಾಗಿದ್ದಾರೆ. ಆಗಸ್ಟ್ 28 ರಂದು ವಿಜಯಪುರ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು, ರೈತ, ವಿದ್ಯಾರ್ಥಿ ಪರ ಸಂಘಟನೆಗಳು ಸೇರಿಕೊಂಡು ಹೋರಾಟ ನಡೆಸಲಾಗುವದು ಎಂದರು.