ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸುವುದನ್ನು ಖಂಡಿಸಿ ಧಾರವಾಡದಿಂದ ಬಿಜೆಪಿ ಕಾರ್ಯಕರ್ತರು ಧರ್ಮಸ್ಥಳ ಚಲೋ ಅಭಿಯಾನ ಹಮ್ಮಿಕೊಂಡಿದ್ದಾರೆ. ಮಾಜಿ ಶಾಸಕ ಅಮೃತ ದೇಸಾಯಿ ಮುಂದಾಳತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಬುಧವಾರ ಬೆಳಿಗ್ಗೆ 11 ಗಂಟೆಗೆ ಧಾರವಾಡ ನಗರದ ಕೆ.ಸಿ.ಡಿ ಗಣಪತಿ ದೇವಸ್ಥಾನದಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭಿಸಲಾಗಿದೆ.