ಹೊಸದುರ್ಗ ಪಟ್ಟಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ಸರ್ವೇಯರ್ ರೆಡ್ ಆ್ಯಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಗುರುವಾರ ಮಧ್ಯಾಹ್ನ 2 ಗಂಟೆ ವೇಳೆ ದಾಳಿ ನಡೆಸಲಾಗಿದ್ದು, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾ ಬಲೆಗೆ ಬಿದ್ದಿದ್ದಾನೆ. ಜಮೀನು ಖಾತೆ ಮಾಡಿಕೊಡುವ ವಿಚಾರಕ್ಕೆ ಶಶಿಕಲಾ ಎಂಬ ಗುಡ್ಡದನೇರಲಕೆರೆ ಗ್ರಾಮದ ಮಹಿಳೆಗೆ 15 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ. ಆದರೆ 10 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಸರ್ವೇಯರ್ ನಾಗರಾಜ್ ಎಂಬ ಅಧಿಕಾರಿನ್ನ ಬಂಧಿಸಿದ್ದಾರೆ. ಹೊಸದುರ್ಗ ಪಟ್ಟಣದ ಬೆಲಗೂರು ರಸ್ತೆಯ ಜೆರಾಕ್ಸ್ ಅಂಗಡಿ ಮುಂಭಾಗ ಹಣ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದಾನೆ.