ಜಿಲ್ಲೆಯಲ್ಲಿ ನೂರಾರು ಕೆರೆಗಳಿದ್ದು ಕೆಲವು ಸ್ಥಳೀಯ ಬಲಾಡ್ಯರ ಕೆರೆ ಒತ್ತುವರಿ ಕಾರಣ ಕೆರೆಗಳಿಗೆ ನೀರಿನ ಮೂಲ ನಿಂತು ಹೋಗಿದೆ. ಆದ್ದರಿಂದ ಅಂತರ್ಜಲ ಕುಸಿತವಾಗುತ್ತಿದೆ. ಸುಮಾರು 80 ವರ್ಷಗಳಿಂದ ಕೆರೆಗಳಲ್ಲಿ ಹೂಳು ತುಂಬಿ ಅಂತರ್ಜಲ ಕುಸಿತವಾಗಿದೆ. ಆದ್ದರಿಂದ ಹೂಳು ತುಂಬಿದ ಕೆರೆಗಳ ಮಣ್ಣನ್ನು ಬೇಸಿಗೆಯಲ್ಲಿ ರೈತರ ಜಮೀನಿಗೆ ಉಚಿತವಾಗಿ ಸರಬರಾಜು ಮಾಡಿದಲ್ಲಿ ಕೃಷಿ ಭೂಮಿಯ ಫಲವತ್ತತೆ ಹೆಚ್ಚುತ್ತದೆ. ಮೈಸೂರು ಜಿಲ್ಲೆಯ ಬಣ್ಣಾರಿ ಸಕ್ಕರೆ ಕಾರ್ಖಾನೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಟನ್‌ಗೆ 3295 ರೂಪಾಯಿಗಳನ್ನು ನೀಡುತ್ತಿದ್ದು, ಕಬ್ಬು ಉತ್ಪಾದನೆ ವೆಚ್ಚಕ್ಕೆ ಸರಿಯಾಗಿಲ್ಲ.