ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡಿಹಾಳ ಗ್ರಾಮದಲ್ಲಿ ಕಳೆದ ಎರಡುವರೆ ವರ್ಷದಿಂದ ಜಲಜೀವನ ಮಿಷನ್ ಯೋಜನೆ ಅಡಿಯ ಕುಡಿಯುವ ನೀರಿನ ಕಾಮಗಾರಿ ನಡೆದಿದ್ದು ಅರ್ಧಂಬರ್ಧ ಕಾಮಗಾರಿ ಮಾಡಿ ನಿಲ್ಲಿಸಿದ್ದರಿಂದ ಗ್ರಾಮದ ಜನರಿಗೆ ರಸ್ತೆಗಳು ಅಗೆದು ಹಾಗೆ ಬಿಟ್ಟಿದ್ದು ಇದರಿಂದ ಸಾರ್ವಜನಿಕರ ಓಡಾಟಕ್ಕೆ ತುಂಬಾ ತೊಂದರೆ ಉಂಟಾಗಿದೆ ಎಂದು ಗ್ರಾಮದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶನಿವಾರ ಮಧ್ಯಾಹ್ನ ಈ ಕುರಿತು ಗ್ರಾಮದ ಜನರು ಮಾತನಾಡಿ, ಅಧಿಕಾರಿಗಳಿಗೆ ಸಂಪರ್ಕಿಸಿದರೆ ಸಂಪರ್ಕಕ್ಕೆ ಸಿಗುತ್ತಿಲ್ಲ, ಈ ಕಡೆಗೆ ಕಾಮಗಾರಿಯನ್ನು ಮುಗಿಸುತ್ತಿಲ್ಲ ಜನರಿಗೆ ತೊಂದರೆ ಉಂಟಾಗಿದೆ ಎಂದು ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದರು.