ಮನೆ ನಿರ್ಮಾಣ ಮಾಡಲು ಲೈಸೆನ್ಸ್ ಪಡೆಯುವ ಸಲುವಾಗಿ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕೃಷ್ಣಮೂರ್ತಿ 5,000/- ರೂಗಳ ಲಂಚದ ಹಣವನ್ನು ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಹಣದೊಂದಿಗೆ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ನಡೆದಿದೆ.ಮಂಜಮ್ಮ ಎನ್ನುವವರು ಹೊಳಲ್ಕೆರೆ ಪಟ್ಟಣದ ಶಿವಮೊಗ್ಗ ರಸ್ತೆಯ ಕುಕುವಾಡೇಶ್ವರಿ ದೇವಸ್ಥಾನದ ಹಿಂಭಾಗದಲ್ಲಿ ಜೈಪುರ ಗ್ರಾಮಕ್ಕೆ ಒಳಪಡುವ ಶಿವಕುಮಾರಸ್ವಾಮಿ ಬಡಾವಣೆಯಲ್ಲಿ 30*30 ಅಳತೆಯ ನಿವೇಶನದಲ್ಲಿ ಮನೆ ನಿರ್ಮಾಣ ಮಾಡಲು ಲೈಸೆನ್ಸ್ ಪಡೆಯುವ ಸಲುವಾಗಿ ಅರೇಹಳ್ಳಿ ಗ್ರಾಮ ಪಂಚಾಯ್ತಿಗೆ ಅರ್ಜಿಯನ್ನು ಸಲ್ಲಿಸಿರುತ್ತಾರೆ. ಲೈಸೆನ್ಸ್ ನೀಡಲು ಹಣಕ್ಕೆ ಹಣಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ.