ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ ಗ್ರಾಮದಲ್ಲಿರುವ ಆದರ್ಶ ವಿದ್ಯಾಲಯದ ಮುಖ್ಯಗುರು ಅವರು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಖಂಡ ಕರ್ನಾಟಕ ರಕ್ಷಣಾ ಸಮಿತಿ ಮುಖಂಡರು ಯಾದಗಿರಿ ನಗರದಲ್ಲಿ ಬುಧವಾರ ಮಧ್ಯಾನ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ. ಮುಖ್ಯ ಗುರು ಅವರು ಸರ್ಕಾರದಿಂದ ಬಂದಿರುವ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ತನಿಖೆ ನಡೆಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಬಡಿಗೇರ ಸುರಪುರ ತಾಲೂಕಾಧ್ಯಕ್ಷ ಬಸವರಾಜ ಹೊಸಮನಿ ಇದ್ದರು.