ಮಳವಳ್ಳಿ : ಶಿಕ್ಷಣದ ಮೂಲಕ ಉತ್ತಮ ಪ್ರಜೆಗಳ ರೂಪಿಸಿ ದೇಶದ ಉತ್ತಮ ಭವಿಷ್ಯ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಅಮೋಘವಾದದು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಆದ ಶಾಸಕ ಪಿ ಎಂ ನರೇಂದ್ರಸ್ವಾಮಿ ಶ್ಲಾಘಿಸಿ ದ್ದಾರೆ. ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು ಶಿಕ್ಷಕರ ಸಂಘಟನೆಗಳ ಹೆಚ್ಚಾಗಿದ್ದು ಇವು ಶಿಕ್ಷಣ ಪ್ರಗತಿಗೆ ಪೂರಕವಾಗಿರಬೇಕು ಎಂದು ಸಲಹೆ ನೀಡಿದರು.