ಬೈಕಂಪಾಡಿ ಕೈಗಾರಿಕಾ ವಲಯದ ಹೆದ್ದಾರಿ ಸಂಪರ್ಕಿಸುವ ರಸ್ತೆ ಸೇರಿದಂತೆ ಬಹುತೇಕ ಒಳ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಕೂಡಲೇ ಗುಂಡಿ ಮುಚ್ಚಿ ರಸ್ತೆ ದುರಸ್ಥಿ ಗೊಳಿಸಲು ಒತ್ತಾಯಿಸಿ, ನಾಗರಿಕರು ಮತ್ತು ಆಟೋ ರಿಕ್ಷಾ ಚಾಲಕರು ಡಿವೈಎಫ್ಐ ಬೈಕಂಪಾಡಿ ಘಟಕದ ನೇತೃತ್ವದಲ್ಲಿ ಬೈಕಂಪಾಡಿ ಕ್ರಾಸ್ ಬಳಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಮಾತನಾಡಿದರು.