ಪ್ರತಿಯೊಬ್ಬ ವ್ಯಕ್ತಿಯೂ ದೇವರು ಎಂದು ಭಾವಿಸುವವನೇ ಹಿಂದೂ ಎಂದು ಖ್ಯಾತವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯ ಪಟ್ಟರು. ಹಿಂದೂ ಮಹಾಸಭಾ ಗಣಪತಿ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ವಿಜಯ ಸಿಂಧೂರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಹಿಂದುತ್ವ ಹಾಗೂ ಭಾರತೀಯ ಸಂಸ್ಕೃತಿಯ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿದರು.