ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ಸವಾರ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಕ್ರಾಸ್ ನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.ಈ ಅಪಘಾತದಲ್ಲಿ ಮಂಡಿಕಲ್ ಗ್ರಾಮದ ಅಂಬರೀಶ್(30) ದಾರುಣ ಸಾವನ್ನಪ್ಪಿದ್ದಾರೆ. ತಮಿಳುನಾಡು ಮೂಲದ ವೆಂಕಟೇಶ್ ಸ್ಥಿತಿ ಚಿಂತಾಜನಕವಾಗಿದೆ.ವೆಂಕಟೇಶ್ ನನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಸಿ,ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆಯು ಚಿಕ್ಕಬಳ್ಳಾಪುರ ಜಿಲ್ಲೆಯ ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೆರೇಸಂದ್ರ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಜಗದೀಶ್ ರೆಡ್ಡಿ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.