ಹಾಸನ: ನಗರದ ಆಡುವಳ್ಳಿ ಯಲ್ಲಿ 50 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಸ್ವರೂಪ್ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿದರು. ಮಹಾನಗರ ಪಾಲಿಕೆ ಸದಸ್ಯರಾದ ಮಂಜುನಾಥ್ ಜೆ. ಹಾಗೂ ಇನ್ನಿತರ ಬಡಾವಣೆ ಮುಖಂಡರ ಸಮ್ಮುಖದಲ್ಲಿ ಅವರು ಭೂಮಿ ಪೂಜೆ ನೆರವೇರಿಸಿದರು.ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡುವಳ್ಳಿ ಬಡಾವಣೆಯಲ್ಲಿ ರಸ್ತೆ ಸಂಪೂರ್ಣ ಹಾಳಾಗಿದ್ದ ಹಿನ್ನೆಲೆಯಲ್ಲಿ ಬಡಾವಣೆ ಜನರ ಮನವಿಗೆ ಸ್ಪಂದಿಸಿ ಮಹಾನಗರ ಪಾಲಿಕೆ ವತಿಯಿಂದ 50 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿ ಆರಂಭಿಸಿದ್ದೇವೆ ಅತೀ ಶೀಘ್ರವಾಗಿ ಕಾಮಗಾರಿ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸಂಭಂದಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು.