ಯಲ್ಲಾಪುರ: ಸೆಪ್ಟೆಂಬರ 13 ರಂದು ಮುಂಡಗೋಡ ದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬಸವ ಸಂಸ್ಕೃತಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸೇರಿದಂತೆ ನಮ್ಮ ಸಮಾಜ ಬಾಂಧವರು ಪಾಲ್ಗೊಂಡು ಒಗ್ಗಟ್ಟಿನ ಪ್ರದರ್ಶನ ಮೂಲಕ ರಾಜ್ಯದಲ್ಲಿ ಗಮನ ಸೆಳೆಯುವಂತಾಗಲಿ ಎಂದು ಅಭಿಯಾನದ ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ವಿ. ಎಸ್. ಪಾಟೀಲ್ ಹೇಳಿದರು. ಪಟ್ಟಣದ ಶ್ರೀ ಬಸವೇಶ್ವರ ದೇವಾಲಯದಲ್ಲಿ ಬಸವ ಸಂಸ್ಕೃತಿ ಯಾತ್ರೆ,ಕುರಿತು ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು. ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ,ಇತರರು ಇದ್ದರು.