ಕುಣಿಗಲ್: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ದಲಿತರ ಕುಂದುಕೊರತೆ ಹಿತ ರಕ್ಷಣಾ ಸಮಿತಿಯ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. “ಕಳೆದ ಒಂದು ವರ್ಷದಿಂದ ದಲಿತರ ಸಭೆ ನಡೆಸದ ತಹಸೀಲ್ದಾರ್ ರಶ್ಮಿ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅಧಿಕಾರಿಗಳು ರಾಜಕಾರಣಿಗಳ ಒತ್ತಡದಲ್ಲಿ ಮೇಲ್ವರ್ಗದ ಪರವಾಗಿ ಮಾತ್ರ ಕೆಲಸ ಮಾಡುತ್ತಿದ್ದಾರೆ,” ಎಂದು ಆರೋಪಿಸಿದರು. ಹೊಳಗುಂದ ಹಾಗೂ ಕಿಚ್ಚವಾಡಿ ಗ್ರಾಮಗಳಲ್ಲಿ ದಲಿತರಿಗೆ ದೇವಾಲಯ ಪ್ರವೇಶ ನಿರಾಕರಿಸಿರುವುದನ್ನೂ ಸಭೆಯಲ್ಲಿ ಖಂಡಿಸಲಾಯಿತು. ಪೊಲೀಸ್ ಠಾಣೆಗಳಲ್ಲಿ ದಲಿತರ ಅರ್ಜಿಗಳನ್ನು ಸ್ವೀಕರಿಸುವುದಿಲ್ಲವೆಂಬ ದೂರೂ ವ್ಯಕ್ತವಾಯಿತು. ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗುವು