ಗುಂಡ್ಲುಪೇಟೆ ಪಟ್ಟಣ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆ ಸೆ.22ರ ಸೋಮವಾರ ನಿಗದಿಯಾಗಿದೆ. 10ನೇ ಅವಧಿಯ ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಪುರಸಭೆ ಸಭಾ ಭವನದಲ್ಲಿ ನಡೆಯಲಿದ್ದು, ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಬಿ’ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಸೆ.22ರ ಬೆಳಗ್ಗೆ 10ರಿಂದ 11 ಗಂಟೆಯೊಳಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, 11ರಿಂದ 1.15 ಗಂಟೆಗೆ ನಾಮಪತ್ರ ಪರಿಶೀಲನೆ ನಡೆಯಲಿದೆ. 11.15ರಿಂದ 11.30ರವರೆಗೆ ನಾಮಪತ್ರ ಹಿಂಪಡೆಯಲು ಕಾಲಾವಕಾಶವಿದೆ. 11.30ರ ನಂತರ ಕಣದಲ್ಲಿರುವ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯಿಂದ 2ರವರೆಗೆ ಚುನಾವಣೆ ನಡೆಯಲಿದೆ.