ಮಳವಳ್ಳಿ : ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲ್ಲೂಕು ದಲಿತ ಸಾಹಿತ್ಯ ಪರಿಷತ್ ವತಿಯಿಂದ ಮಾಜಿ ರಾಷ್ಟ್ರಪತಿ ಡಾ. ರಾಧಾಕೃಷ್ಣ ಹಾಗೂ ದೇಶದ ಪ್ರಥಮ ಮಹಿಳಾ ಶಿಕ್ಷಕಿ ಸಾಹಿತ್ರಿಬಾಯಿ ಪುಲೆ ಅವರ ಜಯಂತಿ ಆಚರಣೆ ಮೂಲಕ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಮಳವಳ್ಳಿ ಪಟ್ಟಣದ ಕನ್ನಡ ಭವನದಲ್ಲಿ ಶುಕ್ರವಾರ ಸಾಯಂ ಕಾಲ 6.30 ರ ಸಮಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖಂಡರು ಮಾಜಿ ರಾಷ್ಟ್ರಪತಿ ಡಾ. ರಾಧಾಕೃಷ್ಣ ಹಾಗೂ ದೇಶದ ಪ್ರಥಮ ಮಹಿಳಾ ಶಿಕ್ಷಕಿ ಅಕ್ಷರದ ಅವ್ವ ಎಂದೇ ಕರೆಯಲಾಗುವ ಸಾವಿತ್ರಿಬಾಯಿ ಪುಲೆ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.