ಹಾಸನ: ಕಡಜದ ಹುಳು ಕಡಿದು ರೈತ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲುಕಿನ ಜೋಗೀಪುರ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.62 ವರ್ಷದ ಕಾಂತರಾಜು ಮೃತ ದುರ್ದೈವಿ ಯಾಗಿದ್ದು ಇವರು ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಅಡ್ಡಲಾಗಿ ಬಿದ್ದಿದ್ದ ತೆಂಗಿನ ಗರಿ ತೆಗೆದು ಪಕ್ಕಕ್ಕೆ ಸರಿಸಲು ಹೋದಾಗ ಅದರಲ್ಲಿ ಗೂಡು ಕಟ್ಟಿಕೊಂಡಿದ್ದ ಕಡಜದ ಹುಳು ಧಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿದ್ದ ಕಾಂತರಾಜು ಅವರನ್ನು ಚನ್ನರಾಯಪಟ್ಟಣ ಆಸ್ಪತ್ರೆಗೆ ಕುಟುಂಬಸ್ಥರು ಕರೆದುಕೊಂಡು ಹೋಗಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಕೂರು ಕ್ರಾಸ್ ಆದಿಚುಂಚನಗಿರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.