ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಅಳ್ನಾವರ ತಾಲೂಕಿನ ವಿವಿಧ ಕಡೆಗಳಲ್ಲಿ ಶನಿವಾರ ಪೊಲೀಸರು ಪಥ ಸಂಚಲನ ನಡೆಸಿದರು. ಅಳ್ಳಾವರ ತಾಲೂಕಿನ ಅಳ್ಳಾವರ ಪಟ್ಟಣ, ಬೆಣಚಿ ಮತ್ತು ಹೊನ್ನಾಪುರ ಗ್ರಾಮ ಸೇರಿದಂತೆ ವಿವಿಧ ಕಡೆಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಆಕರ್ಷಕ ಪಥಸಂಚಲನ ನಡೆಯಿತು. ಕಿಡಿಗೇಡಿಗಳು ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕಾನೂನು ಉಲಂಘಿಸದಂತೆ ಎಚ್ಚರಿಕೆ ಸಂದೇಶ ನೀಡಿದರು.