ಧರ್ಮಸ್ಥಳ ಪ್ರಕರಣದ ಬಗ್ಗೆ ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿಯವರು ಈಗ ರಾಜಕೀಯ ಮಾಡುತ್ತಾ ಧರ್ಮಸ್ಥಳವನ್ನು ಅಶುದ್ಧ ಮಾಡಲು ಹೊರಟಿದ್ದಾರೆ. ಭಕ್ತಾದಿಗಳನ್ನು ಇಟ್ಟುಕೊಂಡು ರಾಜಕೀಯ ಮಾಡಲಾಗುತ್ತಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಿಸಿದರು. ಆಗಸ್ಟ್ 26ರಂದು ಸಂಜೆ 6 ಗಂಟೆಗೆ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 'ಬಿಜೆಪಿಯ 2 ಗುಂಪುಗಳ ಆಂತರಿಕ ರಾಜಕಾರಣದಿಂದ ಈ ಷಡ್ಯಂತ್ರ ನಡೆಯುತ್ತಿದೆ. ಯಾರ್ಯಾರ ಬಂಧವಾಗಿದೆ, ಯಾರ್ಯಾರ ಹೇಳಿಕೆ ಯಾರ್ಯಾರ ಮೇಲೆ ಇದೆ ಎನ್ನುವುದನ್ನು ನೋಡಿದರೆ ಇದು ತಿಳಿಯುತ್ತದೆ' ಎಂದರು