ವಿಜಯಪುರ ಜಿಲ್ಲೆಗೆ ಕುಡಿಯುವ ನೀರು ಪೂರೈಕೆ ಮಾಡುವ ಮುಳವಾಡ ಜಾಕ್ ವೆಲ್ ಗೆ ಶನಿವಾರ ಸಾಯಂಕಾಲ 4ಗಂಟೆ ಸುಮಾರಿಗೆ ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ ಹಾಗೂ ಪಾಲಿಕೆ ಮೇಯರ್ ಕರಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಗೆ ಕುಡಿಯುವ ನೀರು ಪೂರೈಕೆ ಮಾಡುವ ಜಾಕ್ ವೆಲ್ ನಿರ್ವಹಣಾ ಘಟಕ ಪರಿಶೀಲಿಸಿದರು. ಕುಡಿಯುವ ನೀರು ಪೂರೈಕೆಗೆ ಯಾವುದೇ ತೊಂದರೆ ಆಗದಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಪಾಲಿಕೆಯ ಅಧಿಕಾರಿಗಳು ಕುಡಿಯುವ ನೀರು ಪೂರೈಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.