ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕನಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಘವತಿಯಿಂದ ಎಸ್ ಎಸ್ ಎಲ್ ಸಿ, ಪಿಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಭಾನುವಾರ ಮಧ್ಯಾಹ್ನ 12.40 ರ ಸಮಯದಲ್ಲಿ ನಾರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಕೆ. ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ನಗರಸಭೆ ಸದಸ್ಯ ಎಸ್ .ಎಲ್ .ರಂಗನಾಥ್, ಶಿರಾ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿಪಿ ಪಾಂಡುರಂಗಯ್ಯ, ಮಾಜಿ ಅಧ್ಯಕ್ಷ ನರೇಶ್ ಬಾಬು, ಕಾಮಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ. ಎನ್ .ಮಂಜುನಾಥ್, ನಗರಸಭೆ ನಾಮ ನಿರ್ದೇಶನ ಸದಸ್ಯ ಧ್ರುವ ಕುಮಾರ್ ಇದ್ದರು.