ಹಾವೇರಿ ನಗರದ ಎಲ್.ಐ.ಸಿ ಕಾಲೋನಿಯಲ್ಲಿ ಅವೈಜ್ಞಾನಿಕ ಸಿಡಿ ನಿರ್ಮಾಣ ಮಾಡಿರುವುದರಿಂದ ಕೊಳಚೆ ನೀರು ಹಾಗೂ ಮಳೆ ನೀರು ರಸ್ತೆ ಮೇಲೆ ನಿಂತುಕೊಂಡು ಸಾರ್ವಜನಿಕರಿಗೆ ಓಡಾಡಲು ಅನಾನುಕೂಲವಾಗಿದೆ. ಪ್ರತಿನಿತ್ಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ನಗರಸಭೆ ಅಧಿಕಾರಿಗಳು ಸಿಡಿಯನ್ನು ದುರಸ್ತಿಪಡಿಸಿ ನೀರು ಸರಾಗವಾಗಿ ಹರಿದು ಹೋಗಲು ಕ್ರಮ ಕೈಗೊಳ್ಳಬೇಕು ಎಂದು ಎಲ್.ಐಸಿ ಕಾಲೊನಿ ನಿವಾಸಿಗಳು ಆಗ್ರಹಿಸಿದ್ದಾರೆ.