ರಾಜ್ಯಾದ್ಯಂತ ಬರುವ 22ರಿಂದ ಆರಂಭವಾಗಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಧರ್ಮದ ಕಾಲಂನಲ್ಲಿರುವ ಇತರೆ ಕಾಲಂನಲ್ಲಿ ವೀರಶೈವ-ಲಿಂಗಾಯತ ಎಂದು ಬರೆಸುವಂತೆ, ಸಮಾಜದ ಬಾಂಧವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮನವಿ ಮಾಡಿದೆ. ಬೆಂಗಳೂರಿನ ಪ್ಯಾಲೆಸ್ ಗುಟ್ಟಹಳ್ಳಿ ಬಳಿ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವೀರಶೈವ ಸಭಾದ ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷ ಹಾಗೂ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು, ಹಿಂದಿನಿಂದಲೂ ಮಹಾಸಭಾ ವೀರಶೈವ ಲಿಂಗಾಯತ ಧರ್ಮದ ಪ್ರತಿಪಾದನೆ ಮಾಡುತ್ತಾ ಬಂದಿದೆ. ಹೀಗಾಗಿ ಧರ್ಮದ ಕಾಲಂನ ಇತರೆ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಸಬೇಕು ಎಂಬುದು ಸಾರ್ವತ್ರಿಕ ಅಭಿಪ್ರಾಯವಾಗಿದೆ ಎಂದರು.