2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನಿಡಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ದೂರು ನೀಡಿದ್ದಾರೆ. ಸ್ನೇಹಮಯಿ ಕೃಷ್ಣ ಅವರು ವಿಠಲ ಗೌಡ ಅವರ ಬಗ್ಗೆ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿ ಬಳಿಕ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದು ಇದು ಸೌಜನ್ಯ ಕೊಲೆಗಾರರನ್ನು ಪತ್ತೆ ಹಚ್ಚಬೇಕು ಎಂದು ನಡೆಯುತ್ತಿರುವ ಹೋರಾಟವನ್ನು ದಾರಿ ತಪ್ಪಿಸುವ ದುರುದ್ದೇಶದಿಂದ ಮಾಡಿರುವಯದಾಗಿದೆ ಈತನನ್ನು ಮೈಸೂರಿನಿಂದ ಕರೆಸಿ ಈ ರೀತಿ ಹೇಳಿಕೆ ನೀಡಿರುವುದರ ಹಿಂದೆ ಯಾರೋ ಇರುವ ಅನುಮಾನವಿದೆ ಆದ್ದರಿಂದ ಆತನನ್ನು ಠಾಣೆಗೆ ಕರೆಸಿ ಕುಲಂಕುಷವಾಗಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.