ರಾಯಚೂರು ನಗರದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಸಂಜೆವರೆಗೆ ಉಪಲೋಕಾಯುಕ್ತ ಬಿ ವೀರಪ್ಪ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರಿಂದ 320 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 100 ಅರ್ಜಿಗಳಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಕರೆಸಿ, ಸ್ಥಳದಲ್ಲಿಯೇ ಉಪಲೋಕಾಯುಕ್ತರು ವಿಚಾರಣೆ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.