ಹಿಂದುಳಿದ ವರ್ಗಗಳ ಆಯೋಗದ ಜಾತಿವಾರು ಸಮೀಕ್ಷೆಗೆ ನೀಡಿರುವ ಮೊಬೈಲ್ ಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ರಾಯಚೂರ ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ಬೆಳಗ್ಗೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಅನೇಕ ಜನ ಕಾರ್ಯಕರ್ತೆಯರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಮೊಬೈಲ್ ಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರೆ ನಿಮ್ಮ ಮನೆಯ ಮೊಬೈಲ್ ನಿಂದ ಕೆಲಸ ಮಾಡಿ ಇಲ್ಲವಾದಲ್ಲಿ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬೆದರಿಕೆ ಹಾಕುತ್ತಾರೆ ಎಂದು ಆರೋಪಿಸಿದ್ದಾರೆ.