ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 9 ಸಾವಿರ ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು 7.38 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕರೀಗೌಡ ಬುಧವಾರ ಜಿಬಿಎ ಕಚೇರಿಯಲ್ಲಿ ಮಾಹಿತಿ ನೀಡಿದ್ದಾರೆ. ನಗರದಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಿದ್ದರೂ ಕೂಡ, ಅಕ್ರಮವಾಗಿ ಏಕ ಬಳಕೆ ಪ್ಲಾಸ್ಟಿಕ್ ಕವರ್‌ಗಳನ್ನು ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಅಧಿಕಾರಿಗಳು ಉತ್ಪಾದಕರು ಹಾಗೂ ದಾಸ್ತಾನುದಾರರ ಮೇಲೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದಾರೆ.