ಸೋಮವಾರ ಸಂಜೆ 6;30 ರ ಸುಮಾರಿಗೆ ಕೊಪ್ಪಳ ನಗರದ ಪ್ರವಾಸಿ ಮಂದಿರಕ್ಕೆ ಸಚಿವ ಎಚ್ ಕೆ ಪಾಟೀಲ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಸಚಿವರಿಗೆ ಶಾಲು ಹಾಕಿ ಸ್ವಾಗತವನ್ನು ಕೋರಿದರು. ಈ ಸಮಯದಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.