ತಾಲ್ಲೂಕಿನ ಆನೆಮಡಗು ಗ್ರಾಮದಲ್ಲಿ ಆನೆಮಡಗು ವ್ಯವಸಾಯ ಸೇವಾ ಸಹಕಾರ ಸಂಘದ ಆವರಣದಲ್ಲಿ 2024-25 ನೇ ಸಾಲಿನ ಸರ್ವ ಸದಸ್ಯರ ಮಹಾಸಭೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರೈತರಿಗೆ ಬಡ್ಡಿರಹಿತ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ. ಹಾಗಾಗಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರ ಬ್ಯಾಂಕಿನಲ್ಲಿ ವ್ಯವಹರಿಸಬೇಕು. ರಾಷ್ಟ್ರೀಯ ಬ್ಯಾಂಕ್‌ಗಳಿಗಿಂತಲೂ ಉತ್ತಮವಾದ ಸೌಲಭ್ಯ ಇಲ್ಲಿ ಕಲ್ಪಿಸಿಕೊಡಲಾಗುತ್ತಿದೆ ಎಂದರು. ಮುಂದುವರೆದು ಸಾಲ ಪಡೆದಂತವರು ಸಮಯಕ್ಕೆ ಸರಿಯಾಗಿ ಹಿಂತಿರುಗಿಸಿ, ಪುನಃ ಸಾಲ ಪಡೆದುಕೊಂಡರೆ ಸಂಘವು ಅಭಿವೃದ್ಧಿಯಾಗುತ್ತದೆ ಹಾಗೆಯೇ ಮತ್ತಷ್ಟು ರೈತರಿಗೆ ಸಾಲ ನೀಡಲು ಅನುಕೂಲವಾಗುತ್ತದೆ. ರೈತರು ಸಾಲ ಪಡೆದುಕೊಂಡಷ್ಟು ಡಿಸಿಸಿ ಬ್ಯಾಂಕಿನಿಂದ ಸಾಲ ಸೌಲಭ್ಯ ನೀಡಲು ಅನುಕೂಲ