ಸುರ್ಪುರ್ ನಗರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದ ಹಿಂಭಾಗದಲ್ಲಿನ ಸರ್ವೆ ನಂಬರ್ 7/1ರಲ್ಲಿರುವ ಕಾರ್ಯಕರ್ತ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಸುರಪುರದ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಬೆಂಬಲ ವ್ಯಕ್ತಪಡಿಸಲಾಗಿದೆ. ಶನಿವಾರ ಮಧ್ಯಾಹ್ನ ಪಕ್ಷದ ರಾಜ್ಯ ಕಾರ್ಯದರ್ಶಿ ಯಾದಗಿರಿ ಜಿಲ್ಲಾ ಉಸ್ತುವಾರಿಗಳಾದ ದೀಪಾ ಮನೂರ್ ಅವರು ಭಾಗವಹಿಸಿ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಅನೇಕ ಮುಖಂಡರು ಹಾಗೂ ಧರಣಿ ನಿರತರು ಭಾಗವಹಿಸಿದ್ದರು.