ರಾಮನಗರ--ಕೇಂದ್ರ ಸರ್ಕಾರ ಮತದಾನದ ಹಕ್ಕನ್ನು ಕಿತ್ತುಕೊಳ್ಳುತ್ತಿದೆ ಎಂದು ಸೋಮವಾರ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಆರೋಪಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮತ ಗಳ್ಳತನ ವಿರುದ್ಧ ಗಂಬೀರ ಆರೋಪ ಮಾಡಿದರು. ಮಾಧ್ಯಮಗಳಲ್ಲಿ ಗಮನಿಸಿದ್ದೇನೆ ಒಂದು ಮನೆಯಲ್ಲಿ 947 ಮತಗಳು ಇವೆ, ಬಾಬಾ ಸಾಹೇಬ್ ಅಂಬೇಡ್ಕರ್ ನಮಗೆ ನೀಡಿರುವ ಮತದಾನದ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನವನ್ನು ಕೇಂದ್ರದ ಬಿಜೆಪಿ ಸರ್ಕಾರ ಮಾಡುತ್ತಿದೆ.