ಚಿತ್ರದುರ್ಗ:-ನಗರದ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಮಹಾಗಣಪತಿ ವಿಸರ್ಜನಾ ಬೃಹತ್ ಶೋಭಾಯಾತ್ರೆಯು ಶನಿವಾರದಂದು ಅದ್ದೂರಿಯಾಗಿ ನಡೆಯುತ್ತಿದೆ. ವಿಜ್ಞಾನ ಕಾಲೇಜು ಮುಂಭಾಗದಿಂದ ಶುರುವಾದ ಗಣಪತಿ ವಿಸರ್ಜನಾ ಶೋಭಾಯಾತ್ರೆ ಮೂರು ಕಿಲೋಮೀಟರ್ ಸಾಗಿ, ಚಂದ್ರವಳ್ಳಿ ಕೆರೆಯಲ್ಲಿ ವಿಸರ್ಜನೆ ಗೊಳ್ಳಲಿದೆ. ಈ ಮೆರವಣಿಗೆಗೆ ನಿರೀಕ್ಷೆಗೂ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಹಾಗೂ ನೆರೆಯ ರಾಜ್ಯದಿಂದಲೂ ನಿರೀಕ್ಷೆ ಮೀರಿ ಜನರು ಬಂದಿದ್ದರು. ಪ್ರತಿಷ್ಠಾಪನ ಸ್ಥಳದಿಂದ ಗಣಪತಿ ಮೆರವಣಿಗೆ ಹೊರಟು ಮದಕರಿನಾಯಕನ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಸಾಗಿತು.