ಸುರಪುರ ನಗರದಲ್ಲಿ ಡಿಸಿಸಿ ಬ್ಯಾಂಕ್ ಶಾಖೆ ಒಂದೇ ಇರುವುದರಿಂದ ಸುರಪುರ ಮತ್ತು ಹುಣಸಗಿ ತಾಲೂಕಿನ ರೈತರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ ಆದ್ದರಿಂದ ಹುಣಸಗಿ ಪಟ್ಟಣದಲ್ಲಿ ಒಂದು ಹಾಗೂ ಎಲ್ಲಾ ಹೋಬಳಿಗಳಲ್ಲಿ ಒಂದೊಂದು ಶಾಖೆಗಳನ್ನು ಆರಂಭಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಿ ಒತ್ತಾಯಿಸಿದರು. ನಮ್ಮ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.