ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ನಾಳೆ ನಡೆಯುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದೆ. ಈಗಾಗಲೇ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವದ ಹಿನ್ನೆಲೆ 5000 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಎಸ್ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಶುಕ್ರವಾರ ಸಂಜೆ ಶಿವಮೊಗ್ಗ ನಗರದ ಡಿಎಆರ್ ಮೈದಾನದಿಂದ ಪ್ರಮುಖ ಬೀದಿಗಳಲ್ಲಿ ರೂಟ್ ಮಾರ್ಚ್ ನಡೆಯಿತು.