ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ, ಭಾನುವಾರ ಮಧ್ಯಾನ 2ಗಂಟೆ ಸುಮಾರಿಗೆ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುತ್ತಿರುವುದು ಕೂಡಲೇ ಸ್ಥಗಿತಗೊಳಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಿಕೊಡಬೇಕು ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಿದರೆ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ಮನವಿ ಮಾಡಿದರು.