ನಗರದಲ್ಲಿ ಶನಿವಾರ ಬೆಳಗ್ಗೆ 10.30 ಕ್ಕೆ ನಡೆದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮದಲ್ಲಿ ಡಾ. ಎಸ್ ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಅವರು ಚಾಲನೆ ನೀಡಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಹೊರಟು ಅಂಬೇಡ್ಕರ್ ಸರ್ದಾರ್ ವಲ್ಲಭಬಾಯಿ ಪಟೇಲ್ ಬಾಲಾಜಿ ಬಸವೇಶ್ವರ ರಥಗಳ ಮಾರ್ಗವಾಗಿ ಭವ್ಯ ಮೆರವಣಿಗೆ ನಡೆಸಲಾಯಿತು. ಈ ವೇಳೆ ಅಧಿಕಾರಿ ಹಾಗೂ ಶಿಕ್ಷಕರು ಹೆಜ್ಜೆ ಹಾಕಿ ಸಂಭ್ರಮಿಸಿದರು.