ಗುಂಡ್ಲುಪೇಟೆ ತಾಲೂಕಿನ ಕಗ್ಗಳದಹುಂಡಿ ಗ್ರಾಮದ ರೈತರ ಜಮೀನುಗಳಲ್ಲಿ ಹುಲಿ ಓಡಾಟ ಕಂಡು ಬಂದಿದ್ದು ರೈತರು ಆತಂಕಗೊಂಡಿದ್ದಾರೆ. ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಮದ್ದೂರು ಅರಣ್ಯ ವಲಯಕ್ಕೆ ಕಗ್ಗಳದಹುಂಡಿ ಒಳಪಡಲಿದ್ದು ಕಳೆದ ಮೂರ್ನಾಲ್ಕು ದಿನಗಳಿಂದಲೂ ಹುಲಿ ಕಾಣಿಸಿಕೊಳ್ಳುತ್ತಿದೆ. ಇಂದು ಕೂಡ ಕಾಡುಹಂದಿಯನ್ನು ಬೇಟೆಯಾಡಿ ತಿಂದು ಪರಾರಿಯಾಗಿದೆ.