ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಜಿ.ಹೊಸಹಳ್ಳಿ ಗ್ರಾಮದಲ್ಲಿ ಮಡೇನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಹೆಸರನ್ನು ಜಿ.ಹೊಸಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ ಎಂದು ಬದಲಾಯಿಸಿದ ಹಿನ್ನೆಲೆ ಗ್ರಾಮಸ್ಥರ ನಡುವೆ ಬುಧವಾರ ಬೆಳಗ್ಗೆ 11 ಗಂಟೆಯಲ್ಲಿ ಗಲಾಟೆ ನಡೆಯಿತು. 50 ವರ್ಷಗಳಿಂದ ಬಳಕೆಯಲ್ಲಿದ್ದ ಮಡೇನಹಳ್ಳಿ ಹೆಸರು ಕೈಬಿಟ್ಟಿರುವುದಕ್ಕೆ ಮಡೇನಹಳ್ಳಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸರ್ವ ಸದಸ್ಯರ ಸಭೆಯಲ್ಲಿ ಜಿ.ಹೊಸಹಳ್ಳಿ ಗ್ರಾಮಸ್ಥರೊಂದಿಗೆ ವಾಗ್ವಾದ ನಡೆಸಿದರು. ಮಾತಿನ ಚಕಮಕಿ ತಾರಕ್ಕೇರಿದ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಶಾಂತಗೊಳಿಸಿದರು. ಅಂತಿಮವಾಗಿ, ಹೆಸರು ಬದಲಾವಣೆ ವಿಚಾರವನ್ನು ಇನ್ನೂ ಎರಡು