ವಿಶ್ವವಿಖ್ಯಾತ ಅರಮನೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಕೊನೆಯ ಜಂಬೂಸವಾರಿ ಮೆರವಣಿಗೆ ಸಿದ್ದತೆಗಳ ಬಗ್ಗೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸ್ಥಳ ಪರಿಶೀಲನೆ ನಡೆಸಿದರು. ಅರಮನೆ ಅಂಗಳದಲ್ಲಿ ದಸರಾ ಉತ್ಸವದ ಕೊನೆಯ ದಿನ ಜಂಬೂಸವಾರಿ ಮೆರವಣಿಗೆ ವೇಳೆ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಸ್ಥಳವನ್ನು ವೀಕ್ಷಿಸಿದ ಸೀಮಾ ಲಾಟ್ಕರ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಡಿಸಿಎಫ್ ಪ್ರಭುಗೌಡ, ಡಿಸಿಪಿ ಬಿಂದುಮಣಿ, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಮುಂತಾದ ಅಧಿಕಾರಿಗಳು ಹಾಜರಿದ್ದರು.